ದಿನಾಂಕ 11.08.2026 ರ ಮಂಗಳವಾರದಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಮಂಗಳೂರಿನ ಕೇಮಾರು ಮಠದ ಪರಮಪೂಜ್ಯ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಅರ್ಚಕರಾದ ಶ್ರೀ ಕೆ. ಸೂರ್ಯನಾರಾಯಣ ಉಪಾಧ್ಯಾಯರು ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿಕೊಂಡು, ಶ್ರೀ ದೇವರ ವಿಶೇಷ ಪ್ರಸಾದವನ್ನು ನೀಡಿ ಗೌರವಿಸಿದರು. ಹಾಗೆಯೇ ಆಡಳಿತ ಮಂಡಳಿಯ ವತಿಯಿಂದ ಶ್ರೀಗಳಿಗೆ ವಿಶೇಷವಾಗಿ ಗೌರವಿಸಲಾಯಿತು.
ತದನಂತರ ಶ್ರೀಯುತ ಸೂರ್ಯನಾರಾಯಣ ಉಪಾಧ್ಯಾಯರು ದೇವಸ್ಥಾನದ ಸಂಪೂರ್ಣ ವಿವರ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಶ್ರೀಗಳಿಗೆ ಸವಿಸ್ತಾರವಾಗಿ ವಿವರಿಸಿದರು. ಈ ಶುಭ ಸಂದರ್ಭದಲ್ಲಿ ದೇವಳದ ಸಿಬ್ಬಂದಿವರ್ಗ ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು.